ಭಾರತ್ ಬಂದ್ ಗೆ ವಿವಿಧ ಸಂಘಟನೆಗಳ ಬೆಂಬಲ

ದೇಶದ 10 ಕಾರ್ಮಿಕ ಸಂಘಟನೆಗಳು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಭಾರತ್ ಬಂದ್‌ಗೆ ಕರೆ ನೀಡಿವೆ. ಕರ್ನಾಟಕದಲ್ಲಿಯೂ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲವನ್ನು ಸೂಚಿಸಿವೆ.

ಜನವರಿ 8ರ ಬುಧವಾರ ಭಾರತ್ ಬಂದ್ಗೆ ಕರೆ ನೀಡಲಾಗಿದೆ. ವಿವಿಧ ಕಾರ್ಮಿಕ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರ ಭದ್ರತೆಯನ್ನು ಸಹ ಹೆಚ್ಚಿಸಲಾಗಿದೆ.

ಬ್ಯಾಂಕ್ ಉದ್ಯೋಗಿಗಳ ಸಂಘ ಬಂದ್‌ಗೆ ಬೆಂಬಲ ನೀಡಿದೆ. ಎಸ್‌ಬಿಐ ಹೊರತುಪಡಿಸಿ ಉಳಿದ ಎಲ್ಲಾ ಬ್ಯಾಂಕ್‌ಗಳ ವಹಿವಾಟುಗಳು ಇಂದು ಸ್ಥಗಿತಗೊಳ್ಳಲಿದೆ. ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ವರ್ಕರ್ಸ್ ಯೂನಿಯನ್ ಬಂದ್‌ಗೆ ಬೆಂಬಲ ನೀಡಿದೆ. ಆದರೆ, ಬಸ್ ಸೇವೆ ಎಂದಿನಂತೆ ಇರಲಿದೆ.

ಪೆಟ್ರೋಲ್ ಬಂಕ್, ಹೋಟೆಲ್, ಶಾಲಾ-ಕಾಲೇಜುಗಳು ಮುಚ್ಚುವುದಿಲ್ಲ. ಒಂದು ವೇಳೆ ಪ್ರತಿಭಟನೆ ವೇಳೆ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದರೆ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ.