ಟೀಮ್ ಇಂಡಿಯಾದಲ್ಲಿ ಈಗ ಆರಂಭಿಕ ಸ್ಥಾನಕ್ಕೆ ಪೈಪೋಟಿ
ಭಾರತ ತಂಡದಲ್ಲಿ ಈಗ ಆರಂಭಿಕ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ, ಬಲಗೈ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಸದ್ಯ ಅದ್ಭುತ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ, ಗಾಯದ ಸಮಸ್ಯೆಯಿಂದ ಗುಣಮುಖರಾಗಿ ವಾಪಸಾಗಿರುವ ಶಿಖರ್ ಧವನ್ ಶ್ರೀಲಂಕಾ ವಿರುದ್ಧ 2 ಟಿ20 ಪಂದ್ಯದ್ ಕಳೆದ ವೆಸ್ಟ್‌ಇಂಡೀಸ್ ಸರಣಿಯಲ್ಲಿನ ಉತ್ತಮ ಫಾರ್ಮ್ ಅನ್ನು ಶ್ರೀಲಂಕಾ ವಿರುದ್ಧದ ಸರಣಿಯಲ್ಲೂ ಮುಂದುವರಿಸಿದ್ದಾರೆ. ಪರಿಣಾಮ ಲಂಕಾ ವಿರುದ್ಧ ಎರಡನೇ ಪಂದ್ಯದಲ್ಲಿ ಗೆಲುವು ಬಾರಿಸಿರುವ ಟೀಮ್ ಇಂಡಿಯಾ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.ಲಂಕಾ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ರಾಹುಲ್ ಕೇವಲ 32 ಎಸೆತಗಳಲ್ಲಿ ಆರು ಬೌಂಡರಿಗಳ ನೆರವಿನಿಂದ 45 ರನ್ ಗಳಿಸಿದರು. ಆಕರ್ಷಕ ಬ್ಯಾಟಿಂಗ್ ಮೂಲಕ ಬಹಳ ಸಲೀಸಾಗಿ ಚೆಂಡನ್ನು ಬೌಂಡರಿ ಗೆರೆ ದಾಟಿಸುವಲ್ಲಿ ಯಶಸ್ವಿಯಾದರು.ಇದರೊಂದಿಗೆ ಮುಂಬರುವ ವಿಶ್ವಕಪ್ ರೇಸ್‌ನಲ್ಲಿ ರೋಹಿತ್ ಶರ್ಮಾ ಜತೆಗೆ ಓಪನರ್ ಸ್ಥಾನಕ್ಕಾಗಿ ಕೆಎಲ್ ರಾಹುಲ್ ಹಾಗೂ ಶಿಖರ್ ಧವನ್ ಜೊತೆಗೆ ನಿಕಟ ಪೈಪೋಟಿ ಏರ್ಪಟ್ಟಿದೆ. ಈ ಮಧ್ಯೆ ಶಿಖರ್ ಧವನ್ ವಿರುದ್ದ ಯಾವುದೇ ರೀತಿಯ ಪೈಪೋಟಿಗಿಳಿದಿಲ್ಲ ಎಂಬುದನ್ನು ರಾಹುಲ್ ಸ್ಪಷ್ಟಪಡಿಸಿದರು. ದೇಶಕ್ಕಾಗಿ ಪಂದ್ಯ ಗೆಲ್ಲುವ ಸುಲಭ ಯೋಜನೆಯೊಂದಿಗೆ ನಾವೆಲ್ಲರೂ ಆಡುತ್ತಿದ್ದೇವೆ ಎಂದರು.