ಅಮೂಲ್ಯ ಲಿಯೋನಳ ಹಿಂದೆ ಅಂತರಾಷ್ಟ್ರೀಯ ಸಂಸ್ಥೆ ಕೈವಾಡ:ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು :ಪರ ಘೋಷಣೆ ಕೋಗಿದ ಅಮೂಲ್ಯ ಲಿಯೋನ್ ಳ  ಪ್ರಕರಣದ ಹಿಂದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅನುಮಾನ ವ್ಯಕ್ತ ಪಡಿಸಿದ್ದಾರೆ.

ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಬಾದ್ ಎಂದು ಘೋಷಣೆ ಕೂಗಿದ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ರಾಜ್ಯ ಗೃಹ ಸಚಿವರು ದೇಶ ವಿರೋಧಿ ಹೇಳಿಕೆ ನೀಡಿದ ಅಮೂಲ್ಯ ಹಿಂದೆ ಕೆಲ ಸಂಘಟನೆಗಳ ಕುಮ್ಮಕ್ಕು ಇದ್ದಂತೆ ಇದೆ. ಈ ಪ್ರಕರಣದ ಹಿಂದಿರುವರನ್ನು ಪತ್ತೆ ಹಚ್ಚಲು ಫೆಬ್ರವರಿ 23 ರಂದು ಉನ್ನತಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಹೇಳಿದರು.

ಸಿಎಎ, ಎನ್.ಆರ್.ಸಿ ವಿರೋಧಿ ಹೋರಾಟದ ನೆಪದಲ್ಲಿ ಅನೇಕ ಯುವಕ-ಯುವತಿಯ ದಾರಿ ತಪ್ಪಿಸಲಾಗುತ್ತಿದೆ. ಇದರೆ ಹಿಂದೆ ಬೇರೆ ಯಾವುದೋ ಶಕ್ತಿಗಳು ಕೆಲಸ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆ ವಿಶೇಷ ತನಿಕಾ ದಳದ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ದೇಶ ದ್ರೋಹಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.