ಟಿಪ್ಪು ಜಯಂತಿ ವಿವಾದ: ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ....!!
ಬೆಂಗಳೂರು: 2014ರಿಂದ 2019ರವರೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರ ನಡೆಸಿದ ಪ್ರತಿಭಟನೆಯಲ್ಲಿ ಅನೇಕರ ಮೇಲೆ ದಾಖಲಾಗಿದ್ದು ಪ್ರಕರಣವನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ದಾರ ಮಾಡಿದೆ.
ಬಿಜೆಪಿಗರ ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶದಿಂದ ಆಗಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನೇಕ ಅಮಾಯಕರ ಮೇಲೆ ಪ್ರಕರಣ ದಾಖಸಿತ್ತು, ಅವುಗಳನ್ನು ಹಿಂಪಡೆಯುವಂತೆ ಬಿಜೆಪಿ ನಾಯಕ ಕೆಜಿ ಬೋಪಯ್ಯ ಸೇರಿದಂತೆ ಅನೇಕ ನಾಯಕರು ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದರು.
ಅದರಂತೆ ಸಿಎಂ ಬಿಎಸ್ ಯಡಿಯೂರಪ್ಪ, ಈಗ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಈ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿದ್ದು, ಎಲ್ಲಾ ಪ್ರಕರಣಗಳನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದಾರೆ. ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ.