ಕರ್ನಾಟಕದ ತುಳಸಿ ಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ.

ಕಳೆದ 60 ವರ್ಷಗಳಿಂದ ಗಿಡ ನೆಟ್ಟು ಬೆಳೆಸಿರುವ  ವೃಕ್ಷಮಾತೆ ಹಾಲಕ್ಕಿ ಸಮಾಜದ ತುಳಸಿ ಗೌಡ ರವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ದೊರೆತಿದೆ   ಉತ್ತರಕನ್ನಡದ ಜಿಲ್ಲೆಗೆ ಮತ್ತೊಮ್ಮೆ ಕೇಂದ್ರ ಸರ್ಕಾರ  ಪದ್ಮಶ್ರೀ ಘೋಷಿಸಿದೆ. ಅಂಕೋಲಾ‌ ತಾಲ್ಲೂಕಿನಲ್ಲಿ ಹೆಚ್ಚಾಗಿ ನೆಲೆಸಿರುವ ಹಾಲಕ್ಕಿ ಸಮಾಜಕ್ಕೆ ಎರಡನೇ ಬಾರಿ ಪದ್ಮಶ್ರೀ ದೊರಕಿದೆ.  ಅಲ್ಲದೇ ತುಳಸಿ ಗೌಡ ಸಾಧನೆಗೆ ಕೇಂದ್ರ ಸರಕಾರ ಮೆಚ್ಚಿ ಇಂದಿರಾ ಪ್ರಿಯದರ್ಶಿನಿಯಂತಹ ಉನ್ನತ ಪ್ರಶಸ್ತಿಯನ್ನೂ ಪಡೆದು ಇಡೀ ದೇಶ ಉತ್ತಕನ್ನಡ ಜಿಲ್ಲೆಯ ಕಡೆಗೆ ಹಾಲಕ್ಕಿ ಸಮಾಜದ ಕಡೆಗೆ ನೋಡುವಂತೆ ಮಾಡಿದ್ದರು.   
ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ 72 ವರ್ಷದ ವೃದ್ಧೆ ತುಳಸಿಗೌಡ ಅವರು ಸದ್ದಿಲ್ಲದೇ ಪ್ರಕೃತಿ ರಕ್ಷಣೆ ನಿಂತಿದ್ದಾರೆ.  72 ವರ್ಷದ ತುಳಸಿ ಗೌಡ ಅವರು ಕಳೆದ 57 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರಿ ಮಾಡಿಕೊಂಡಿದ್ದಾರೆ. ಲಕ್ಷಾಂತರ ಗಿಡಗಳನ್ನು ನೆಟ್ಟು ಬೋಳು ಬಿದ್ದ ಗುಡ್ಡಗಳಿಗೆ ಹಸಿರ ಹೊದಿಕೆ ಹೊದಿಸಿದ್ದಾರೆ. ಬಾಲ್ಯದಲ್ಲೇ ಅಪ್ಪ, ಮದುವೆಯಾದ ಬಳಿಕ ಗಂಡನ ಕಳೆದುಕೊಂಡ್ರೂ ಕಾಡಿನ ಕಟ್ಟಿಗೆ ಮಾರಿ ಬದುಕು ಕಟ್ಟಿಕೊಂಡ್ರು. ಈ ವೇಳೆ ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯಕ್ಕೆ ಸೇರಿಕೊಂಡರು.
ಮನೆಯಲ್ಲಿ ಬಡತನ, ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದರೂ ಕಳೆದ 60 ವರ್ಷಗಳಿಂದ ಪರಿಸರ ಪ್ರೇಮ ತೋರಿಸುತ್ತಿದ್ದು, ಲಕ್ಷಾಂತರ ಸಸಿಗಳನ್ನು ನೆಟ್ಟಿದ್ದಾರೆ. ಮರಗಳ ವಿಜ್ಞಾನಿ ಎಂದೇ ಉತ್ತರ ಕನ್ನಡದಲ್ಲಿ ಇವರನ್ನು ಕರೆಯಲಾಗುತ್ತದೆ.
ಕಾಡಿನಿಂದ ತಂದ ಬೀಜಗಳನ್ನು ಸಸಿ ಮಾಡಿ ಶಾಲೆ ಆವರಣ, ರಸ್ತೆ, ಗುಡ್ಡ ಬೆಟ್ಟದಲ್ಲಿ ನೆಟ್ಟು ಪೋಷಿಸ ತೊಡಗಿದರು.  ಒಂದೇ ವರ್ಷದಲ್ಲಿ 30 ಸಾವಿರ ಸಸಿಗಳನ್ನು ನೆಟ್ಟು ಅರಣ್ಯ ಇಲಾಖೆಯಿಂದ ಹಣ ನೀಡದಿದ್ದರೂ, ಅವುಗಳ ರಕ್ಷಣೆಯನ್ನು ಮಾಡಿದ್ರು. 300ಕ್ಕೂ ಹೆಚ್ಚು ಕಾಡು ಮರಗಳ ಬಗ್ಗೆ ಮಾಹಿತಿ ಇರುವ ಇವರು `ಸಸ್ಯ ವಿಜ್ಞಾನಿ’ ಎಂದೇ ಪ್ರಸಿದ್ಧಿ ಪಡೆದಿದ್ದಾರೆ.