CAA ಕಿಚ್ಚಿಗೆ ಹೊತ್ತಿ ಉರಿದ ಉತ್ತರ ಪ್ರದೇಶ........
ಉತ್ತರ ಪ್ರದೇಶ : ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ತಾಳಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನಡೆದ ಘರ್ಷಣೆಯಲ್ಲಿ ನಿನ್ನೆ ಆರು ಜನ ಬಲಿಯಾಗಿದ್ದಾರೆ ಜನ ಬಲಿಯಾಗಿದ್ದಾರೆ. ಈ ಮೂಲಕ ಇದುವರೆಗೂ ಉತ್ತರಪ್ರದೇಶದಲ್ಲಿ ಪ್ರತಿಭಟನೆಗೆ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಕಳೆದ ಎರಡು ದಿನಗಳಿಂದ ಉತ್ತರ ಪ್ರದೇಶದಾದ್ಯಂತ
144 ಸೆಕ್ಷನ್ ಜಾರಿಗೊಳಿಸಲಾಗಿದ್ದರೂ, ಜನರು ನಿಷೇಧಾಜ್ಞೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ನಿಯಂತ್ರಣಕ್ಕೆ ಪೋಲಿಸರು ಫೈರಿಂಗ್ ನಡೆಸುತ್ತಿದ್ದು ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಆರು ಜನ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಬಿಜ್ ನೂರ್ ನಲ್ಲಿ ಇಬ್ಬರು, ಕಾನ್ಪುರ , ಫಿರೋಜಾಬಾದ್ ಹಾಗೂ ಸಂಭಾಲದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.