ವಿಶಾಖಪಟ್ಟಣ ಅನಿಲ ದುರಂತ : ಸಾವಿನ ಸಂಖ್ಯೆ 10 ಕ್ಕೆ ಏರಿಕೆ : 300 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು: ತನಿಖೆಗೆ ಆಗ್ರಹಿಸಿದ ಚಂದ್ರಬಾಬು ನಾಯ್ಡು .
ಇಂದು ಬೆಳಿಗ್ಗೆ ಆಂಧ್ರದ ವಿಷಾಖಪಟ್ಟಣ ದಲ್ಲಿನ ಎಲ್.ಜಿ ಪಾಲಿಮರ್ಸ್ ಕಂಪನಿಯ ರಾಸಾಯನಿಕ ಘಟಕದಿಂದ ವಿಷಾನಿಲ ಸೋರಿಕೆಯಾಗಿದೆ.ಇದರ ಪರಿಣಾಮ ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಸ್ಥರು ವಿಷಾನಿಲ ಉಸಿರಾಡಿದ್ದಾರೆ. ಇದರಿಂದ 10 ಕ್ಕೂ ಹೆಚ್ಚು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು 300 ಕ್ಕೂ ಅಧಿಕ ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇನ್ನು ಸ್ಥಳಿಯ ಪೋಲಿಸರು , ಅಗ್ನಿ ಶಾಮಕ ದಳ ಹಾಗೂ ರಾಷ್ಟೀಯ ವಿಪತ್ತು ನಿರ್ವಹಣಾ ತಂಡ ಸದ್ಯ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಹಲವು ಜನರನ್ನು ಸ್ಥಳಾಂತರ ಮಾಡಲಾಗಿದೆ. ಜನರಿಗೆ ಮನೆಯಿಂದ ಹೊರಬಾರದಂತೆ ಸೂಚನೆ ನೀಡಲಾಗಿದೆ. ಸದ್ಯ ಸೂಕ್ತ ಆಂಟಿಡೊಟ್ ಬಳಸಿ ಅನಿಲವನ್ನು ತಟಸ್ಥಗೋಳಿಸಲಾಗಿದೆ.
ಇನ್ನು ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಆಂಧ್ರದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದು, ಈ ದುರ್ಘಟನೆ ಕುರಿತು ತನಿಖೆ ನಡೆಸುವಂತೆ ಜಗನ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಜೊತೆಗೆ ವಿಷಾನಿಲ ಸೋರಿಕೆಯಾದ ಕಾರ್ಖಾನೆಯನ್ನು ತಕ್ಷಣವೇ ಮುಚ್ಚುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.