ರಾಜ್ಯದ ಒಂದಿಂಚು ಜಾಗವನ್ನು ಬಿಡಲ್ಲ...ಮಹಾರಾಷ್ಟ್ರ ಸರ್ಕಾರಕ್ಕೆ ಬಿಎಸ್ ವೈ ಖಡಕ್ ಸಂದೇಶ.

ಬೆಂಗಳೂರು : ಇಂದು ಸಚಿವ ಸಂಪುಟ ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಈಗಾಗಲೇ ಮಹಾಜನ್ ವರದಿಯಂತೆ ಗಡಿ ನಿಗದಿಯಾಗಿದೆ. ಹೀಗಾಗಿ ಕರ್ನಾಟಕದ ಒಂದಿಂಚು ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಮಹಾರಾಷ್ಟ್ರ ಸರ್ಕಾರ ರಾಜಕೀಯ ಕಾರಣಗಳಿಗೆ ಗಡಿ ಕ್ಯಾತೆ ತೆಗೆಯುತ್ತಿದೆ. ಗಡಿ ವಿಚಾರದಲ್ಲಿ ರಾಜಕೀಯ ಬೇಳೆ ಬೆಯೀಸಿಕೊಳ್ಳಬೇಡಿ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಜತೆಗೆ ಸಚಿವರಾದ ಜಗದೀಶ್‌ ಶೆಟ್ಟರ್‌, ಆರ್‌. ಅಶೋಕ್‌, ಬಿ. ಶ್ರೀರಾಮುಲು, ಸಿ.ಟಿ. ರವಿ ಅವರೂ ಮಹಾರಾಷ್ಟ್ರದ ಸರ್ಕಾರ ಹಾಗೂ ಅಲ್ಲಿನ ರಾಜಕೀಯ ಪಕ್ಷಗಳ ಧೋರಣೆಯನ್ನು ಖಂಡಿಸಿದ್ದಾರೆ.