ಜಿಲಾಟಿನ್ ಸ್ಪೋಟದಲ್ಲಿ ಆರು ಮಂದಿ ದುರ್ಮರಣ
ಮಂಗಳವಾರ ಬೆಳಿಗ್ಗೆ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೆನಾಗವೆಲಿ ಗ್ರಾಮದ ಕ್ವಾರಿ ಜಾಗದಲ್ಲಿ ಸಂಭವಿಸಿದ ಸ್ಪೋಟದಲ್ಲಿ ಆರು ಜನ ಸಾವನ್ನೊಪ್ಪಿದ್ದಾರೆ.
ಈ ಘಟನೆಯಲ್ಲಿ ಬಾಗಿಯಾಗಿರುವ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ವರದಿಗಳ ಪ್ರಕಾರ, ಜಿಲಾಟಿನ್ ಸ್ಟಿಕ್ ಗಳನ್ನು ವಾಹನದಲ್ಲಿ ಸಾಗಿಸುವಾಗ ಸ್ಪೋಟ ಸಂಭವಿಸಿದೆ.ಪೆರೆಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿರುವ ಕರ್ನಾಟಕ ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ” ಈ ಸ್ಪೋಟಗಳನ್ನು ಅಕ್ರಮವಾಗಿ ಬಳಸಲಾಗಿದ್ದು, ಘಟನೆಗೆ ಕಾರಣರಾದವರ ವಿರುದ್ಧ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಹಾಗೂ ಈ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಾನು ಘಟನೆಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿಸಿದ್ದೇನೆ ಮತ್ತು ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ” ಎಂದು ಅವರು ಹೇಳಿದರು.
ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆರೋಗ್ಯ ಸಚಿವ ಸುಧಾಕರ್ ಹಾಗೂ ಮತ್ತಿತರ ಅಧಿಕಾರಿಗಳೊಂದಿಗೆ ಮಾತನಾಡಿದ್ದು , ಈ ಘಟನೆಯ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು. ಈ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಳೆದ ತಿಂಗಳು ಜನವರಿಯಲ್ಲಿ ಇದೇ ರೀತಿಯ ಘಟನೆಯಲ್ಲಿ ಶಿವಮೊಗ್ಗ ಜಿಲ್ಲೆಯ ಜಲ್ಲಿ ಮತ್ತು ಬಂಡೆ ಪುಡಿಮಾಡುವ ಸೌಲಭ್ಯದ ಬಳಿ ಸಂಭವಿಸಿದ ಭಾರಿ ಸ್ಪೋಟದ ನಂತರ ಆರು ಜನರು ಸಾವನ್ನಪ್ಪಿದ್ದರು. ಘಟನೆಯ ನಂತರ , ಕ್ವಾರಿ ಮಾಲೀಕ ಮತ್ತು ಅವನಿಗೆ ಡೈನಮೈಟ್ ಸರಬರಾಜು ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ವರದಿ : ನವಿತ