ಕೊರೋನಾ ನಿಗ್ರಹಕ್ಕೆ ಎಲ್ಲರೂ ಕೈಜೋಡಿಸಿ': ಮಕ್ಕಳ ಕೊರೋನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮನವಿ ಮಾಡಿಕೊಂಡ ಸಿಎಂ ಬೊಮ್ಮಾಯಿ ರಾಜ್ಯಾದ್ಯಂತ 15ರಿಂದ 18 ವರ್ಷದ ಮಕ್ಕಳ ಕೊರೋನಾ ಲಸಿಕೆ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಇಂದು ಸೋಮವಾರ(ಜ.3) ಚಾಲನೆ
ಬೆಂಗಳೂರು: ರಾಜ್ಯಾದ್ಯಂತ 15ರಿಂದ 18 ವರ್ಷದ ಮಕ್ಕಳ ಕೊರೋನಾ ಲಸಿಕೆ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಇಂದು ಸೋಮವಾರ(ಜ.3) ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರ ಶಾಲೆಯಲ್ಲಿ ಸಿಎಂ ಬೊಮ್ಮಾಯಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದು ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್, ವಸತಿ ಖಾತೆ ಸಚಿವ ವಿ ಸೋಮಣ್ಣ, ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಮೊದಲಾದವರು ಉಪಸ್ಥಿತರಿದ್ದರು.