ಉತ್ತರ ಕರ್ನಾಟಕದ ಜನತೆಗೆ ಭರ್ಜರಿ 'ಗುಡ್ ನ್ಯೂಸ್' ಬಹು ದಿನಗಳ ಬೇಡಿಕೆ ೧೦ ಕಛೇರಿಗಳು ಸ್ಥಳಾಂತರ.
ಉತ್ತರ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಹತ್ತು ಕಚೇರಿಗಳನ್ನು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸ್ಥಳಾಂತರಿಸಲು ಅಧಿಸೂಚನೆ ಹೊರಡಿಸಲಾಗಿದ್ದು, ಈ ಮೂಲಕ ಆ ಭಾಗದ ಜನತೆಯ ಬಹು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.
ಕೃಷ್ಣಾ ಭಾಗ್ಯ ಜಲ ನಿಗಮ ಆಲಮಟ್ಟಿಗೆ ಸ್ಥಳಾಂತರಿಸಲಾಗಿದ್ದು, ಕರ್ನಾಟಕ ನೀರಾವರಿ ನಿಗಮ ದಾವಣಗೆರೆಗೆ ಸ್ಥಳಾಂತರಗೊಳ್ಳಲಿದೆ. ಬೆಳಗಾವಿಯಲ್ಲಿ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಸ್ಥಳಾಂತರವಾಗಲಿದ್ದು, ಸಕ್ಕರೆ ನಿರ್ದೇಶಕರು ಮತ್ತು ಅಭಿವೃದ್ಧಿ ಆಯುಕ್ತರ ಕಚೇರಿಯೂ ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸಲಿದೆ.
ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸಲಿದ್ದು, ಹಂಪಿಗೆ ಪುರಾತತ್ವ ಸಂಗ್ರಹಾಲಯಗಳ ನಿರ್ದೇಶಕರು, ಪರಂಪರೆ ಇಲಾಖೆ ಸ್ಥಳಾಂತರವಾಗಲಿದೆ.