ರಾಜ್ಯದ ವಿಧವಾ, ವೃದ್ಧಾಪ್ಯ,ಅಂಗವಿಕಲರಿಗೆ ಗುಡ್ ನ್ಯೂಸ್...

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದ ವೃದ್ಧಾಪ್ಯ ವಿಧವಾ ಹಾಗೂ ಅಂಗವೀಕಲರ ವೇತನ ಸೇರಿ ಎಲ್ಲ ಸಾಮಾಜಿಕ ಪಿಂಚಣಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕೊರೊನಾ ಹಿನ್ನೆಲೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಬಾಕಿ ಇರುವ ಪೂರ್ಣ ಹಣ ಬಿಡುಗಡೆಗೆ ಆದೇಶ ನೀಡಲಾಗಿದೆ ಎಂದರು.
ಇನ್ನು ಕೊರೊನಾ ಹಳ್ಳಿಗಳಿಗೂ ಹರಡದಂತೆ ತಡೆಗಟ್ಟಲು ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಕಾರ್ಯಪಡೆಯನ್ನು ಸರ್ಕಾರ ರಚನೆ ಮಾಡಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯ ಕಾರ್ಯಪಡೆಯಲ್ಲಿ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಲೆಕ್ಕಾಧಿಕಾರಿ, ಗ್ರಾಮದ ಬೀಟ್ ಪೊಲೀಸ್, ಆರೋಗ್ಯ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು, ನೋಂದಾಯಿತ ಸ್ಥಳೀಯ ವೈದ್ಯರು ಸದಸ್ಯರಾಗಿದ್ದು, ಪಿಡಿಒ ಸದಸ್ಯ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.