ಸರ್ಕಾರಿ ಜಮೀನು ಒತ್ತುವರಿ- ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಗಣಿ ಆಕ್ರಮ ತನಿಖಾ ಲೋಕಾಯುಕ್ತ ತಂಡದ ಅವಧಿಯನ್ನು ವಿಸ್ತರಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಂಡಿದ್ದು, ಲೋಕಾಯುಕ್ತ ತನಿಖೆ ತಂಡದ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ. ಸಂಪುಟ ಸಭೆಯ ಬಳಿಕ ಸಚಿವ ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಕುರಿತ ಎ.ಟಿ. ರಾಮಸ್ವಾಮಿ ನೇತೃತ್ವದ ಸಮಿತಿಯನ್ನು ಪುನರ್ ರಚನೆ ಮಾಡಲಾಗುವುದು. ಸಂಪುಟ ಸಭೆಯಲ್ಲಿ ಚರ್ಚಿಸಿ  ಸಮಿತಿಯನ್ನು ಪುನರ್ ರಚನೆ ಮಾಡಲು ತೀರ್ಮಾನಿಸಲಾಗಿದೆ. ಈ ಸಮಿತಿಗೆ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಎಂದು ಹೆಸರಿಡಲು ನಿರ್ಧರಿಸಲಾಗಿದೆ.