ಕರ್ನಾಟಕ ರಾಜ್ಯ ಬಜೆಟ್ 2020: ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರದಿಂದ ಕೊಡುಗೆಗಳು .....
ಇಂದು ಮಂಡನೆಯಾದ 2020-21ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ಹಲವಾರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಶೈಕ್ಷಣಿಕ ಕ್ಷೇತ್ರಕ್ಕೆ ಬಜೆಟ್ ನಲ್ಲಿ ನೀಡಿದ ಕೊಡುಗೆಗಳು
- ವಸತಿ ಶಾಲೆಗಳ ಮೇಲ್ದರ್ಜೆಗೆ ಕ್ರಮ.
- ಶಿಕ್ಷಕ ಮಿತ್ರ ಆಪ್ ಅಭಿವೃದ್ಧಿ.
- ತಿಂಗಳಲ್ಲಿ 2 ದಿನ ಬ್ಯಾಗ್ ರಹಿತ ದಿನ ಯೋಜನೆ.
-SSLCಯಲ್ಲಿ ಪ್ರತಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
-ಎಸ್‌ಟಿ ಎಸ್‌ಸಿ ವಿದ್ಯಾರ್ಥಿಗಳಿಗೆ ಒಂದು ಲಕ್ಷ ನೀಡಲು ಕ್ರಮ
-ಇದಕ್ಕಾಗಿ 60 ಲಕ್ಷ ರೂಪಾಯಿ ಅನುದಾನ.
-ಶಿಕ್ಷಕರಿಗಾಗಿ 'ಶಿಕ್ಷಕ ಮಿತ್ರ' ಆಪ್ ಅಭಿವೃದ್ಧಿಪಡಿಸಲು ಕ್ರಮ.
-ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಶೇ 25 ರಷ್ಟು ಸ್ಥಾನ ಮೀಸಲು.
-ಅಲ್ಪಸಂಖ್ಯಾತರ ಇಲಾಖೆ ನಿರ್ವಹಿಸುತ್ತಿರುವ 5 ಮೊರಾರ್ಜಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ.
-ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ 4 ಕೋಟಿ ಅನುದಾನ.