ಡಿಕೆಶಿಗೆ ಕೆಪಿಸಿಸಿ ಪಟ್ಟ, ವಿರೋಧಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಕೆಗೆ ಸೋನಿಯಾ ಸಮ್ಮತಿ, ನಾಳೆ ಘೋಷಣೆ ಸಾಧ್ಯತೆ..!
ಕಳೆದ ಕೆಲ ದಿನಗಳಿಂದ ಕೆಪಿಸಿಸಿ ಅದ್ಷಕ್ಷ ಸ್ಥಾನ ಹಾಗೂ ಸಿಎಲ್ ಪಿ ನಾಯಕನ ನೇಮಕಕ್ಕಾಗಿ ತೀವ್ರ ಕಸರತ್ತು ನಡೆದಿತ್ತು. ಈ ನಡುವೆ ಸೋನಿಯಾಗಾಂಧಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಫೈನಲ್ ಮಾಡಿದ್ದಾರೆ ಎನ್ನಲಾಗಿದೆ. ನಾಳೆಯೇ ಈ ಬಗ್ಗೆ ಅಧಿಕೃತ ಘೋಷಣೆ ಪ್ರಕಟವಾಗುವ ನಿರೀಕ್ಷೆ ಇದೆ.
ಇನ್ನು ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನೇ ಮುಂದುವರೆಸಲು ಸೋನಿಯಾಗಾಂಧಿ ಸಮ್ಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಈ ಆಯ್ಕೆಗೆ ಸಂಬಂಧಿಸಿದಂತೆ ಅಂತಿಮ ಹಂತದ ಕಸರತ್ತು ನಡೆದಿದ್ದು, ಈ ಕುರಿತು ಸೋನಿಯಾಗಾಂಧಿ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಕೆಪಿಸಿಸಿ ಅಧ್ಯಕ್ಷಗಾದಿಗೆ ಡಿ.ಕೆ.ಶಿವಕುಮಾರ್ ಅವರ ಹೆಸರು ಫೈನಲ್ ಆಗಿದೆ ಎಂಬುದು ಕಾಂಗ್ರೆಸ್ ನಾಯಕರ ಆಪ್ತ ಮೂಲಗಳಿಂದ ತಿಳಿದುಬಂದಿದೆ…