ಕುದುರೆ ರೇಸ್ ಬೆಟ್ಟಿಂಗ್, ಮೂವರ ಬಂಧನ.
ಬೆಂಗಳೂರು:- ಕುದುರೆ ರೇಸ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಮೂವರನ್ನು ಬಂದಿಸಿ ನಗದನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಸುರೇಶ(40),ಮಂಜುನಾಥ್(33),ಶ್ರೀನಿವಾಸ(44), ಬಂಧಿತ ಆರೋಪಿಗಳಾಗಿದ್ದಾರೆ. ಬಂದಿತರಿಂದ 22 ಸಾವಿರ ರೂಪಾಯಿ ನಗದು, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ನಗರದ ವಿವಿದೆಡೆ ಕುದುರೆ ರೇಸ್ ಬೆಟ್ಟಿಂಗ್ ಜೂಜಾಟದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಇವರ ವಿರುದ್ಧ ಆರ್.ಟಿ ನಗರ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.