ಮಂಡ್ಯದಲ್ಲಿನ 30 ಅಕ್ರಮ ಕಲ್ಲು ಗಣಿಗಾರಿಕೆ ನಿಷೇಧ....!!
ಮಂಡ್ಯ : ಬೇಬಿ ಬೆಟ್ಟ ಕಾವಲಿನಲ್ಲಿರುವರವ ಅನಧಿಕೃತ ಗಣಿಗಾರಿಕೆ ಮಾಡುತ್ತಿರುವುದರಿಂದ ಅನುಮತಿಕೊಟ್ಟಂತಹ 22 ಸಿ ಫಾರಂ, 30 ಕ್ರಷರ್ ಹಾಗೂ 30 ಖ್ವಾರೆಗಳನ್ನು ರದ್ದುಪಡಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಹಾಗೂ ಜಲ್ಲಿ ಕಲ್ಲುಪುಡಿ ಘಟಕಗಳ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಪಾಂಡವಪುರ ತಾಲ್ಲೂಕು, ಬೇಬಿ ಬೆಟ್ಟ ಗ್ರಾಮದ ವ್ಯಾಪ್ತಿಯ ಅನಧಿಕೃತ ಗಣಿಗಾರಿಕೆ ಹಾಗೂ ಸಾಗಾಣಿಕೆ ಸಂಬಂಧಿಸಿದಂತೆ ಗಣೀಗಾರಿಕೆ ನಿಯಂತ್ರಿಸಲು ಶಾಶ್ವತ ಚೆಕ್ ಪೋಸ್ಟ್ ಳನ್ನು ನಿರ್ಮಾಣ ಮಾಡಲಾಗಿದ್ದು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ನಿಯಂತ್ರಿಸಲು ಪರಿಶೀಲನೆಗೆಂದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು