ಆರ್ಥಿಕತೆಯ ಅಭಿವೃದ್ಧಿಗೆ ಕೆಂದ್ರ ಬಜೆಟ್‌ ಅನುಕೂಲಕಾರಿ : ಶಶಿಕಲಾ ಜೊಲ್ಲೆ

ಬೆಂಗಳೂರು: ಕೇಂದ್ರ ವಿತ್ತ ಮಂತ್ರಿಗಳಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ ನಮ್ಮ ದೇಶದ ಆರ್ಥಿಕತೆಗೆ ಬೂಸ್ಟರ್‌ ನೀಡುವ ಡೋಸ್‌ ಆಗಿದೆ ಎಂದು ಮುಜರಾಯಿ, ಹಜ್‌ ಮತ್ತು ವಖ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಉಲ್ಲೇಖಿಸಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿತ್ವದಲ್ಲಿ ನಾವುಗಳು ಅಭಿವೃದ್ದಿಯ ಅಮೃತ ಕಾಲಕ್ಕೆ ಸಾಕ್ಷೀಯಾಗಿದ್ದೇವೆ. ಮುಂದಿನ 25 ವರ್ಷಗಳ ಅಭಿವೃದ್ದಿಯ ನೀಲಿನಕ್ಷೆಯನ್ನು ವಿತ್ತ ಸಚಿವರು ನೀಡಿದ್ದಾರೆ. ಹೆದ್ದಾರಿ ಜಾಲವನ್ನ 25 ಸಾವಿರ ಕಿಲೋ ಮೀಟರ್‌ಗಳಷ್ಟು ವಿಸ್ತರಿಸುವುದು, ದೇಶದ 5 ನದಿಗಳನ್ನು ಜೋಡಿಸುವ ವಿಸ್ತ್ರುತ ಯೋಜನೆಯನ್ನು ಅಂತಿಮಗೊಳಿಸಿರುವುದು, ನೈಸರ್ಗಿಕ ಕೃಷಿಗೆ ಒತ್ತು ನೀಡುವಂತಹ ಮಹತ್ವದ ಅಂಶಗಳನ್ನು ಆಯವ್ಯಯದಲ್ಲಿ ತಿಳಿಸಿದ್ದಾರೆ.