1.jpeg)
ಅಖಾಡಕ್ಕಿಳಿದ ಅಮಿತ್ ಶಾ......!!!
ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ತಂತ್ರಗಾರಿಕೆಯಲ್ಲಿದೆ ನಿರತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಅವರ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಈಗಾಗಲೆ ಚುನಾವಣಾ ಆಯೋಗ ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 8ರಂದು ಮತದಾನ ನಡೆಯಲಿದೆ. ಫೆಬ್ರವರಿ 11ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿಯಲ್ಲಿ ಪ್ರಸ್ತುತ ಆಮ್ ಆದ್ಮಿ ಪಕ್ಷದ ಸರ್ಕಾರವಿದೆ.
"ಆಮ್ ಆದ್ಮಿ ಪಕ್ಷ ತನ್ನ ಅಧಿಕಾರ ಅವಧಿಯಲ್ಲಿ ಭರವಸೆಗಳನ್ನು ನೀಡುತ್ತಾ ಬಂದಿದ್ದು, ಕಳೆದ ಮೂರು ತಿಂಗಳಿನಲ್ಲಿ ಜನರ ತೆರಿಗೆ ಹಣವನ್ನು ಪ್ರಚಾರಕ್ಕಾಗಿ ಬಳಸಿಕೊಂಡಿದೆ" ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.
ರಾಜಕೀಯ ಪಕ್ಷಗಳ ಚುನಾವಣಾ ರಣತಂತ್ರಗಳ ನಡುವೆ ಅಧಿಕಾರದ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎನ್ನುವುದ ಚುನಾವಣಾ ಫಲಿತಾಂಶದವರೆಗೂ ಕಾಯಲೇಬೇಕು.