
ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕಕ್ಕೆ ಸೂಕ್ತ ಆಟಗಾರ ಎಂದು ಹೇಳಿದ ಅನಿಲ್ ಕುಂಬ್ಳೆ
ಭಾನುವಾರ ಆರಂಭಗೊಳ್ಳಲಿರುವ ವಿಂಡೀಸ್ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿ ಎಂದು ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ ಹೇಳಿದ್ದಾರೆ. ಏಕದಿನ ಸರಣಿಯಲ್ಲಿ ಭಾರತೀಯ ಬೌಲರ್ ಗಳಿಗೆ ಸವಾಲು ಎದುರಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಬಲಿಷ್ಠ ಬ್ಯಾಟಿಂಗ್ ಬಲ ಹೊಂದಿರುವ ಕೆರಿಬಿಯನ್ನರ ವಿರುದ್ಧ ಟೀಮ್ ಇಂಡಿಯಾದ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಬೇಕಿದೆ. ಈ ಸರಣಿಯಿಂದ ಶಿಖರ್ ಧವನ್ ಔಟ್ ಯಾಗಿರುವ ಕಾರಣ ಅವರ ಸ್ಥಾನವನ್ನು ಕೆ ಲ್ ರಾಹುಲ್ ಸರಿಯಾಗಿ ಬಳಸಿಕೊಳ್ಳಬೇಕು ಮತ್ತು ಅವರ ಸಾಮರ್ಥ್ಯ ಸಾಬೀತುಪಡಿಸಬೇಕಾಗಿದೆ.