
ವೇತನ ಪರಿಷ್ಕರಣೆ ಆಗ್ರಹಿಸಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರ......
ವೇತನ ಪರಿಷ್ಕರಣೆಗೆ ಆಗ್ರಹಿಸಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರ..!
ಬ್ಯಾಂಕ್ ಸಂಘಟನೆಯ ಒಕ್ಕೂಟ ವೇದಿಕೆ ಜನವರಿ 31 ಹಾಗೂ ಫೆಬ್ರವರಿ 1 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರ ಕ್ಕೆ ಕರೆ ನೀಡಿದೆ. ಫೆಬ್ರವರಿ 1 ರಂದು ಬಜೆಟ್ ಮಂಡನೆ ಆಗಲಿದ್ದು,ವೇತನ ಪರಿಷ್ಕರಣೆ ಕುರಿತು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿದೆ.
ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ಹಾಗೂ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ,ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ಭಾರತೀಯ ಬ್ಯಾಂಕ್ ನೌಕರರ ಫೆಡರೇಷನ್, ಭಾರತೀಯ ರಾಷ್ಟ್ರೀಯ ಬ್ಯಾಂಕ್ ನೌಕರರ ಫೆಡರೇಶನ್, ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್, ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ ಮತ್ತು ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಒಕ್ಕೂಟಗಳನ್ನು ಈ ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆಯು (UFBU) ಒಳಗೊಂಡಿದೆ.2017 ರ ನವೆಂಬರ್ 1 ರಿಂದ ಬಗೆ ಹರಿಸಲಾರದೆ ಉಳಿದ ವೇತನದ ಬೇಡಿಕೆಯನ್ನು ಶೀಘ್ರದಲ್ಲೇ ಬಗೆಹರಿಸುವಂತೆ ಒತ್ತಾಯಿಸಿ ಮಾರ್ಚ್ ತಿಂಗಳಿನಲ್ಲಿ ಸಹ ಮುಷ್ಕರಕ್ಕೆ ಕರೆ ನೀಡಿದೆ .