
ಸಾರ್ವಜನಿಕರಿಗೆ ತಟ್ಟದ ಬಂದ್ ನ ಬಿಸಿ....!
ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಇಂದು ಬೆಂಗಳೂರಿನಲ್ಲಿ ಸಾರಿಗೆ ನೌಕರರು ಬೃಹತ್ ಧರಣಿ ನಡೆಸಲು ಮುಂದಾಗಿದ್ದಾರೆ. ಆದರೆ, ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಎಂದಿನಂತೆ ಮುಂಜಾನೆಯಿಂದಲೇ ನಗರದಲ್ಲಿ ಬಸ್ಗಳು ಸಂಚರಿಸುತ್ತಿವೆ.
ಇನ್ನು, ಸ್ಯಾಟಲೈಟ್ ಬಸ್ ನಿಲ್ದಾಣದಿಂದಲೂ ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸಂಚಾರ ಸುಗಮವಾಗಿ ಸಾಗಿದೆ. ಹೀಗಾಗಿ ಇಂದಿನ ಸಾರಿಗೆ ನೌಕರರ ಪ್ರತಿಭಟನೆಯಿಂದ ಪ್ರಯಾಣಿಕರಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದ ಹಲವು ಕಡೆಗಳಿಗೆ ಕೆಎಸ್ಆರ್ಟಿಸಿ ಬಸ್ಗಳು ಎಂದಿನಂತೆ ತೆರಳುತ್ತಿವೆ.
ಬೆಂಗಳೂರು ಹೊರವಲಯ ಸೇರಿ ರಾಜ್ಯದ ಯಾವುದೇ ಜಿಲ್ಲೆಯಲ್ಲೂ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ. ಎಲ್ಲಾ ಮಾರ್ಗಗಳಲ್ಲೂ ಬಸ್ ಸಂಚಾರ ಆರಂಭವಾಗಿದ್ದು, ಸಾರ್ವಜನಿಕರಿಗೆ ಮುಷ್ಕರದ ಬಿಸಿ ತಟ್ಟಿಲ್ಲ.