
ಮಾಜಿ ಸಚಿವ ಜೆಡಿಎಸ್ ಮುಖಂಡ `ಅಮರನಾಥ ಶೆಟ್ಟಿ' ನಿಧನ
ಮಾಜಿ ಸಚಿವ,ಜೆಡಿಎಸ್ ಮುಖಂಡ ಕೆ.ಅಮರನಾಥ್ ಶೆಟ್ಟಿ ಅವರು ಇಂದು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ನಿಧನ ಹೊಂದಿದ್ದಾರೆ.
ಕರಾವಳಿ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ನಿಧನಕ್ಕೆ ಇಂದು ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.