
ಸುಳ್ಳು ಪ್ರಮಾಣ ಪತ್ರ ಆರೋಪ; ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಬಿಗ್ ರಿಲೀಫ್
ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ನೀಡಿದ ಆರೋಪ ಪ್ರಕರಣಕ್ಕೆ ಸಂಭಂದಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಬಿಗ್ ರಿಲೀಫ್ ನೀಡಿದೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಮೈಕಲ್ ಡಿ ಕುನ್ಹಾ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಪ್ರಜ್ವಲ್ ರೇವಣ್ಣ ಸುಳ್ಳು ಪ್ರಮಾಣ ಪತ್ರ ನೀಡಿದ್ದರೆಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಎ.ಮಂಜು, ಅವರ ಗೆಲುವನ್ನು ಅನೂರ್ಜಿತಗೊಳಿಸುವಂತೆ ಹೈ ಕೋರ್ಟ್ ಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ಪ್ರಕರಣವನ್ನು ವಿಚಾರಿಸಿದ ಹೈ ಕೋರ್ಟ್ ಅಫಿಡೆವಿಟ್ ಹಾಕಿಲ್ಲ ಎಂದು ತಾಂತ್ರಿಕ ಕಾರಣದಿಂದ ಪ್ರಕರಣವನ್ನು ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ಜಯ ಸಂದಿದೆ.