
ಡಾ.ರಾಜಕುಮಾರ್ ಅವರ ಹೆಸರನ್ನು ಭಾರತರತ್ನಕ್ಕೆ ಶಿಫಾರಸು ಮಾಡುವಂತೆ ಸಿಎಂಗೆ ಮನವಿ....
ಕನ್ನಡ ಚಿತ್ರರಂಗದ ನಟಸಾರ್ವಭೌಮ ಎಂದೇ ಪ್ರಸಿದ್ಧರಾದ ಡಾ.ರಾಜ್ ಕುಮಾರ್ ಹೆಸರನ್ನ ಭಾರತರತ್ನಕ್ಕೆ ಶಿಫಾರಸು ಮಾಡುವಂತೆ ಅಭಿಮಾನಿಗಳು ಮನವಿ ಮಾಡಿದ್ದಾರೆ.
ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘ ಇಂದು ಡಾಲರ್ಸ್ ಕಾಲೋನಿಯ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಡಾ.ರಾಜ್ ಕುಮಾರ್ ಹೆಸರನ್ನ ಭಾರತರತ್ನಕ್ಕೆ ಶಿಫಾರಸು ಮಾಡಿ ಎಂದು ಅವರು ಸಿಎಂ ಗೆ ಮನವಿ ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.