1.jpeg)
ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೊತ್ಸವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಕಿಂಗ್ ಸ್ಟಾರ್ ಯಶ್ ಮಾಡಿದ ಮನವಿ ಇದು....
ಬೆಂಗಳೂರು : ಪ್ರತಿ ವರ್ಷ ಸಿನಿಪ್ರಿಯರು ಕಾತುರದಿಂದ ಕಾಯುವ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೊತ್ಸವಕ್ಕೆ ಬುಧವಾರ ಸಂಜೆ ಅದ್ದೂರಿ ಚಾಲನೆ ಸಿಕ್ಕಿದೆ. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೊತ್ಸವದ ಉದ್ಘಾಟನಾ ಸಮಾರಂಭ ನೇರವೆರೀತು.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ , ಗಾಯಕ ಸೋನು ನಿಗಮ್ , ರಾಕಿಂಗ್ ಸ್ಟಾರ್ ಯಶ್,ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಹಾಗೂ ಹಿರಿಯ ನಟಿ ಜಯಪ್ರದಾ ಪಾಲ್ಗೊಂಡಿದ್ದರು.
ಸಮಾರಂಭದಲ್ಲಿ ಸಿನಿಮೊತ್ಸವದ ಮಾಹಿತಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಯಶ್, ನಮ್ಮ ರಾಜ್ಯದಲ್ಲಿ ಉತ್ತಮ ಸ್ಟುಡಿಯೋ ಇಲ್ಲದ ಕಾರಣ ಕನ್ನಡ ಚಿತ್ರಗಳನ್ನು ಬೇರೆ ರಾಜ್ಯಗಳಿಗೆ ಹೋಗಿ ಶೂಟ್ ಮಾಡಬೇಕಾದ ಅನಿವಾರ್ಯತೆ ಇದೆ. ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಪ್ರತಿಭೆಗಳಿದ್ದು, ಇಡಿ ಭಾರತೀಯ ಚಿತ್ರರಂಗವನ್ನೇ ಆಳುವ ಸಾಮರ್ಥ್ಯ ಚಂದನವನಕ್ಕಿದೆ. ನಮಗೊಂದು ಸುಸಜ್ಜಿತ ಸ್ಟುಡಿಯೋ ಕಟ್ಟೀಕೊಡಿ.ಆ ಮೂಲಕ ಕನ್ನಡದ ಪ್ರತಿಭೆಗಳಿಗೆ ಅನುಕೂಲ ಮಾಡಿಕೊಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ನಟಿ ಅದಿತಿ ಪ್ರಭುದೇವ, ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈ ರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.