2.jpeg)
ಸೋನಿಯಾ ಕರೆಗಾಗಿ, ಕೆಪಿಸಿಸಿ ಅಧ್ಯಕ್ಷರ ಸಲುವಾಗಿ, ದೆಲ್ಲಿಗೆ ಹೋರಟ ಸಿದ್ದರಾಮಯ್ಯ
ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಸಂಬಂಧ ದಿಲ್ಲಿಗೆ ಬರಲು ಆಯ್ದ ರಾಜ್ಯ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಲಿದ್ದಾರೆ. ವರಿಷ್ಟರ ಸೂಚನೆಯಂತೆ ಸೋಮವಾರ ದಿಲ್ಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ ರಾತ್ರಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಜತೆ ಚರ್ಚೆ ಬಳಿಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆಯಂತೆ ಹೈಕಮಾಂಡ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಬುಲಾವ್ ನೀಡಿದೆ. ಮಂಗಳವಾರದಿಂದ ಸೋನಿಯಾಗಾಂಧಿ 10 ದಿನಗಳ ಕಾಲ ವಿದೇಶ ಪ್ರವಾಸ ಮಾಡಲಿದ್ದಾರೆ. ಈ ಹಿನ್ನೆಲೆ ಅಷ್ಟರೊಳಗೆ ಕೆಪಿಸಿಸಿ ನಾಯಕ ಹುದ್ದೆ ಫೈನಲ್ ಮಾಡುವ ಸಾಧ್ಯತೆ ಇದೆ.