
ಹೊಸ ವರ್ಷಾಚರಣೆಗೆ ಸಜ್ಜಾದ ಸಿಲಿಕಾನ್ ಸಿಟಿ...ಅಹಿತಕರ ಘಟನೆ ತಡೆಯಲು ಖಾಕಿ ಸರ್ಪಗಾವಲು...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷಾಚರಣೆ ಸಂಭ್ರಮಕ್ಕೆ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಇಲಾಖೆ ಕೂಡ ಸಜ್ಜಾಗಿದೆ.
ನಗರದಲ್ಲಿ ಹೊಸ ವರ್ಷದ ಆಚರಣೆ ಭದ್ರತೆ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ನಗರದಲ್ಲಿ 1500 ಕ್ಯಾಮೆರಾ ಅಳವಡಿಸಲಾಗಿದೆ. ಡ್ರಿಂಕ್ ಆ್ಯಂಡ್ ಡ್ರೈವ್ ಮಾಡುವವರ ತೀವ್ರ ತಪಾಸಣೆ ನಡೆಸಲಾಗುವುದು. ಡಿ.31ರ ರಾತ್ರಿ 10 ರಿಂದ 2ರ ವೆರೆಗೆ ಫ್ಲೈಓವರ್ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಡ್ರಗ್ಸ್ ಬಳಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಭದ್ರತೆಗಾಗಿ 11 ಡಿಸಿಪಿ, 70 ಎಸಿಪಿ, 230 ಇನ್ಸ್‌ಪೆಕ್ಟರ್, 7 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದರು.
ಹೆಚ್ಚುವರಿ ನಿಗಾ ವಹಿಸಲು ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೊ ವ್ಯವಸ್ಥೆ ಇರುತ್ತದೆ. ಬಾರ್, ರೆಸ್ಟೊರೆಂಟ್‌ಗಳು, ಪಬ್‌ಗಳಿಗೂ 2 ಗಂಟೆಯವರೆಗೆ ಅವಕಾಶ ನೀಡಲಾಗುತ್ತದೆ ಎಂದು ಭಾಸ್ಕರ್‌ರಾವ್ ತಿಳಿಸಿದರು.