
ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆ ವಿರೋಧಿಸಿ ಕಾರವಾರ ಬಂದ
ಕಾರವಾರ, : ಸಾಗರಮಾಲಾ ಯೋಜನೆ ವಿರೋಧಿಸಿ ಕಾರವಾರದ ಕಡಲತೀರವನ್ನು ಉಳಿಸಿಕೊಳ್ಳಲು ಮೀನುಗಾರುರ ಮತ್ತು ಸ್ಥಳೀಯರು ನಡೆಸುತ್ತಿರುವ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟವನ್ನು ತೀವ್ರಗೊಳಿಸಿರುವ ಮೀನುಗಾರರು ನೀಡಿದ್ದ ಕಾರವಾರ ಬಂದ್ ಕರೆಗೆ ಉತ್ತಮ ಸ್ಪಂದನ ವ್ಯಕ್ತವಾಗಿದೆ.
ಬೆಳಗ್ಗೆಯಿಂದಲೇ ಕಾರವಾರ ತಾಲೂಕಿನ ಎಲ್ಲಾ ಅಂಗಡಿಮುಂಗಟ್ಟುಗಳು ಸಂಪೂರ್ಣ ಮುಚ್ಚಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ (ಕಾರವಾರದಿಂದ ಭಟ್ಕಳದವರೆಗೆ) ಮೀನುಗಾರಿಕೆ ಹಾಗೂ ಮಾರಾಟ ಸ್ಥಗಿತಗೊಳಿಸಿ ಬೆಂಬಲ ನೀಡಿದ್ದಾರೆ.
ಸಾಗರಮಾಲಾ ಯೋಜನೆ ವಿರೋಧಿಸಿ ಜಿಲ್ಲೆಯ ವಿವಿಧ ಮೀನುಗಾರಿಕಾ ಸಂಘಟನೆಗಳ ನೇತೃತ್ವದಲ್ಲಿ ಕಾರವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಳ್ಳಲಿದ್ದಾರೆ.