
ಇಂದು ಸಿದ್ದಗಂಗಾ ಮಠಕ್ಕೆ ಮೋದಿ ಭೇಟಿ...
ತುಮಕೂರು: ಜ.2 ರಂದು ನಗರದ ಸಿದ್ಧಗಂಗಾ ಮಠಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುವ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿರುವ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆಯನ್ನು ವಿವಿಧ ರೀತಿಯ ಹೂಗಳಿಂದ ಅಲಂಕರಿಸಲಾಗಿದೆ.
ಗದ್ದುಗೆ ಬಳಿ ಹೂವುಗಳಿಂದ ಭಾರತದ ಭೂಪಟವನ್ನು ಚಿತ್ರಿಸಲಾಗಿದೆ. ಕೇಸರಿ, ಬಿಳಿ, ಹಸಿರು ಹಾಗೂ ನೀಲಿ ಬಣ್ಣದ ಹೂಗಳನ್ನು ಬಳಸಿ ಸುಂದರ ಭೂಪಟವನ್ನು ಬಿಡಿಸಲಾಗಿದೆ.
ಕೃಷಿ ಸಾಧಕರ ಸನ್ಮಾನ ಕಾರ್ಯಕ್ರಮ, 12 ರಾಜ್ಯದ ಕೃಷಿ ಸಚಿವರು ಭಾಗಿ
ನಗರದಲ್ಲಿ ಗುರುವಾರ ನಡೆಯಲಿರುವ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭ ನಿರೀಕ್ಷೆಗೂ ಮೀರಿ ಯಶಸ್ವಿಯಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಎಂ, ಗೃಹ ಮಂತ್ರಿ, ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಜತೆಗೆ ಸಮಾರಂಭದ ಒಟ್ಟಾರೆ ಸಿದ್ಧತೆ ಪರಿಶೀಲಿಸಲಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯದ ಮಂತ್ರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉತ್ತಮವಾದ ರೀತಿಯಲ್ಲಿಪೂರ್ವ ತಯಾರಿ ಮಾಡಿದ್ದಾರೆ. ಪ್ರಧಾನಿಯವರ ಭಾಷಣ ಕೇಳಲು ಹೆಚ್ಚಿನ ಸಂಖ್ಯೆಯಲ್ಲಿಜನರು ಭಾಗವಹಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.