.jpeg)
ಪದವಿ ಪೂರ್ವ ಉಪನ್ಯಾಸಕರಿಂದ ಮೌಲ್ಯ ಮಾಪನ ಬಹಿಷ್ಕಾರದ ಎಚ್ಚರಿಕೆ :
ಬೆಂಗಳೂರು : ಪದವಿ ಪೂರ್ವ ಕಾಲೇಜ್ ನ ಉಪನ್ಯಾಸಕರು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಿಯು ಪರಿಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯ ಮಾಪನವನ್ನು ಬಹಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಈ ಬಗ್ಗೆ ಮಾತನಾಡಿ, 'ಪದವಿ ಪೂರ್ವ ಉಪನ್ಯಾಕರಿಗೆ ವೇತನ ತಾರತಮ್ಯ ಸರಿಪಡಿಸಿ, ವೇತನ ಬಡ್ತಿ ಮಂಜೂರು ಮಾಡುವುದು ಸೇರಿ ಇನ್ನೂ ಕೆಲವು ಬೇಡಿಕೆಗಳ ಈಡೇರಿಕೆಗಾಗಿ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರ ಮಾಡುತ್ತಿದ್ದೇವೆ' ಎಂದು ಹೇಳಿದ್ದಾರೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು , ಮಾರ್ಚ್ 4 ರಂದು ಆರಂಭವಾಗಿ ಮಾರ್ಚ್ 22 ರಂದು ಕೊನೆಗೊಳ್ಳಲಿವೆ.