
ಶತಕ ಪೂರೈಸಿದ ರಾಬರ್ಟ್ ಚಿತ್ರದ ಚಿತ್ರೀಕರಣ
ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ರಾಬರ್ಟ್ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈಗ ರಾಬರ್ಟ್' ತಂಡದಿಂದ ಭರ್ಜರಿ ಸುದ್ದಿಯೊಂದು ಹೊರಬಿದ್ದಿದೆ.ಇನ್ನೇನು ಕೆಲವೇ ದಿನಗಳ ಚಿತ್ರೀಕರಣ ಮಾತ್ರ ಬಾಕಿ ಇದ್ದು ,ಚಿತ್ರತಂಡ ಚಿತ್ರೀಕರಣ ಪ್ರಾರಂಭಿಸಿ ಇಂದಿಗೆ 100 ದಿನಗಳಾಗಿದೆ.ಈ ಬಗ್ಗೆ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದೆ.
ಇನ್ನು ರಾಬರ್ಟ್ ಚಿತ್ರದ ಕೆಲವು ದೃಶ್ಯಗಳು ಮತ್ತು ಹಾಡಿನ ಚಿತ್ರೀಕರಣ ಬಾಕಿಯಿದೆ. ಕೊನೆಯ ಹಂತದಲ್ಲಿ ಇರುವ ರಾಬರ್ಟ್ ಚಿತ್ರೀಕರಣ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ.
ರಾಬರ್ಟ್ ಚಿತ್ರದಲ್ಲಿ ದರ್ಶನ್ ಗೆ ನಾಯಕಿ ಆಶಾ ಭಟ್ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ವಿಲನ್ ಆಗಿ ಖ್ಯಾತ ನಟ ಜಗಪತಿ ಬಾಬು ಮಿಂಚಿದ್ದಾರೆ. ಇನ್ನು ನಟ ವಿನೋದ್ ಪ್ರಭಾಕರ್ ಕೂಡ ಪ್ರಮುಖ ಪಾತ್ರದಲ್ಲಿ ಬಣ್ಣಹಚ್ಚಿದ್ದಾರೆ. ಸ್ಯಾಂಡಲ್ ವುಡ್ ನ ನಿರೀಕ್ಷೆಯ ಚಿತ್ರವಾಗಿರುವ ರಾಬರ್ಟ್ ಮುಂದಿನ ವರ್ಷ ಯುಗಾದಿಗೆ ತೆರೆಗೆ ಬರುವ ಸಾಧ್ಯತೆ ಇದೆ.