.jpeg)
ಇಂದು ಭಾರತದ ಬಿರುಗಾಳಿ ಸಂತ ; ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿ......
ಇಂದು ಹಿಂದು ಧರ್ಮದ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿದ,ವಿಶ್ವವನ್ನೇ ಬೆರಗುಗೊಳಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿ.
ಜಾತಿ, ಧರ್ಮ, ಪಂಥಗಳ ವಿಚಾರದಲ್ಲಿ ಕಿತ್ತಾಟಗಳು ನಡೆಯುತ್ತಿದ್ದ ಸಂದರ್ಭದಲ್ಲೇ ವಿಶ್ವಕ್ಕೆ ಏಕಧರ್ಮದ ಸಂದೇಶವನ್ನು ಹಿಂದೂ ಧರ್ಮದ ಮಹತ್ವವನ್ನು ಎತ್ತಿ ತೋರಿಸಿದ್ದು ಸ್ವಾಮಿ ವಿವೇಕಾನಂದರು.
ಅಮೆರಿಕಾಕದಲ್ಲಿ ನಡೆದ ಧರ್ಮ ಸಂಸತ್ ನಲ್ಲಿ ನಡೆದ ಸಭೆಯಲ್ಲಿ ಹಿಂದೂ ಧರ್ಮದ ಸಾರವನ್ನು ವಿಶ್ವಕ್ಕೆ ಸಾರಿದ್ದ ವಿವೇಕಾನಂದರು.....
1893ರ ಸೆಪ್ಟೆಂಬರ್.11ರಲ್ಲಿ ಅಮೆರಿಕಾದ ಚಿಕಾಗೋದಲ್ಲಿ ಸರ್ವಧರ್ಮ ಸಮ್ಮೇಳನವು ನಡೆಯಿತು. ಈ ವೇಳೆ ಭಾರತವನ್ನು ಸ್ವಾಮಿ ವಿವೇಕಾನಂದರು ಪ್ರತಿನಿಧಿಸಿದ್ದರು. ದೇಶದ ಹಿರಿಮೆ ಹಾಗೂ ಹಿಂದೂ ಧರ್ಮದ ಸಾರವನ್ನು ವಿಶ್ವಕ್ಕೆ ಸಾರಿ ಹೇಳಿದ ವೀರ ಸನ್ಯಾಸಿಯನ್ನು ಪ್ರಪಂಚವೇ ಬೆಕ್ಕಸ ಬೆರಗಾಗಿ ನೋಡುತ್ತಿತ್ತು.
ಸ್ವಾಮಿ ವಿವೇಕಾನಂದರ 157ನೇ ಜನ್ಮದಿನವಾದ ಹಿನ್ನೆಲೆಯಲ್ಲಿ ದೇಶವಷ್ಟೇ ಅಲ್ಲದೇ ಇಡೀ ಪ್ರಪಂಚವೇ ವೀರ ಸನ್ಯಾಸಿಯನ್ನು ಸ್ಮರಿಸಿಕೊಳ್ಳುತ್ತಿದೆ.