
ಎಸ್ ಎಸ್ ಎಲ್ ಸಿ ಯಲ್ಲಿ ಹಾಸನಕ್ಕೆ ಅಗ್ರಸ್ಥಾನ :ಕೊನೆಗೂ ಹುಟ್ಟಿಕೊಂಡ ಅನುಮಾನ ....!!!
ಕಳೆದ ಬಾರಿ ಪರೀಕ್ಷೆ ವೇಳೆ ಹಾಸನ ಜಿಲ್ಲೆಯಲ್ಲಿ ಸಾಮೂಹಿಕ ನಕಲು ನಡೆದಿತ್ತುಎಂಬ ಆರೋಪ ಕೇಳಿ ಬಂದಿದೆ.
ಅದರ ಸಂಬಂದ ಸಿಸಿ ಕ್ಯಾಮರಾ ಅಳವಡಿಕೆಗೆ ತೀರ್ಮಾನಿಸಲಾಗಿದೆ.
2020ರಲ್ಲಿ ನಡೆಯುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಈಗಾಗಲೇ ಪೂರ್ವ ಸಿದ್ಧತೆ ಶುರುವಾಗಿದೆ. 2019ರ ಮಾರ್ಚ್ ನಲ್ಲಿ ನಡೆದ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದ್ದು, ರಾಮನಗರ ಜಿಲ್ಲೆ ಎರಡನೇ ಸ್ಥಾನದಲ್ಲಿತ್ತು. ಇದು ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಾಮೂಹಿಕ ನಕಲು ನಡೆದಿರುವ ಆರೋಪ ಕೇಳಿ ಬಂದಿತ್ತು.
ಹಾಸನದಲ್ಲಿ ಕಳೆದ ಬಾರಿ ಸಾಮೂಹಿಕ ನಕಲು ನಡೆದಿದೆ ಎಂದು ಶಿವಕುಮಾರ್ ಎಂಬ ಶಿಕ್ಷಕರೊಬ್ಬರು ಹಾಸನದ ಡಿಡಿಪಿಐ ಪ್ರಕಾಶ್ ಎಂಬುವವರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನಲೆಯಲ್ಲಿ 2020 ರಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ವೇಳೆ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಲು ಡಿಡಿಪಿಐ ಆದೇಶ ಹೊರಡಿಸಿದ್ದಾರೆ.