
ಕಿಸಾನ್ ಸಮ್ಮಾನ್ ಯೋಜನೆ' ಫಲಾನುಭವಿ ರೈತರಿಗೆ ಸಿಹಿಸುದ್ದಿ : ಶೀಘ್ರವೇ 4 ನೇ ಕಂತಿನ ಹಣ ಬಿಡುಗಡೆ
ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪ್ರಧಾನಮಂತ್ರಿ ಕಿಸಾಸ್ ಸಮ್ಮಾನ್ ಯೋಜನೆ ಫಲಾನುಭವಿ ರೈತರ ಖಾತೆಗೆ ಮತ್ತೊಂದು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅರ್ಹ ಫಲಾನುಭವಿಗಳಿಗೆ ನಾಲ್ಕನೇ ಹಂತದ ನೆರವು ಮೊತ್ತವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ 6 ಸಾವಿರ ರೂ. ಮತ್ತು ರಾಜ್ಯ ಸರ್ಕಾರದಿಂದ 4 ಸಾವಿರ ರೂ.ಗಳನ್ನು ನೀಡುತ್ತಿದ್ದು,ಈಗಾಗಲೇ ಮೂರು ಕಂತುಗಳನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. 4 ನೇ ಕಂತಿನ ಮೊತ್ತವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.